ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 19 ಕ್ಕೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇತ್ತ ಗುರುವಾರ ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಬೀದರ್, ಹುಬ್ಬಳ್ಳಿ- ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಳೆಯಿಂದ ಹಲವೆಡೆ ಇಳೆಯು ತಂಪಾಗಿದೆ.
Health Care: ಚಪಾತಿ ಹಿಟ್ಟನ್ನು ಪ್ರಿಡ್ಜ್ʼನಲ್ಲಿಟ್ಟು ಬಳಕೆ ಮಾಡಿದ್ರೆ ಈ ಸಮಸ್ಯೆಗಳು ಬರಬಹುದು ಎಚ್ಚರ.!
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?
ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,
ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.