ಬೆಂಗಳೂರು:- ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ನೆಮ್ಮದಿ ಸುದ್ದಿ ಒಂದು ಸಿಕ್ಕಿದೆ.
ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ಹಣ ಮಾಡಲು ಹೋದ ಗ್ಯಾಂಗ್! ಖಾಕಿ ಬಲೆಗೆ ಬಿದ್ದದ್ದು ಹೇಗೆ?
ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಹಣ ಬರದೇ ಕಂಗಾಲಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆ ತಪ್ಪಿಸಲು ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಾವತಿ ಮಾಡಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಾಗಿದೆ ಎಂದು ಶಾಸಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗೃಹಲಕ್ಷ್ಮಿ ಕಂತು ಪಾವತಿಗೂ ಹಣದ ಕೊರತೆ ಉಂಟಾಗಿದೆ. ಹೀಗಾಗಿ 3 ಕಂತು ಪಾವತಿ ಮಾಡಿಲ್ಲ ಎಂದು ಎಂದು ಮಹಿಳೆಯರು ಮಾತನಾಡಿಕೊಳ್ಳುತ್ತಿದ್ದಾರೆ..
ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆಯಾದರೆ ಇದು ಅಕ್ರಮಕ್ಕೆ ಕಾರಣವಾಗಬಹುದು ಎಂಬ ಮಾತುಗಳು ಕೇಳಿ ಬಂದಿದೆ.