ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಮುಂತಾದ ಕಡೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಬಿಪಿಎಲ್ ಕಾರ್ಡ್ ಕುರಿತು ಸಿಎಂ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಶೇಕಡಾ 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇಕಡಾ 40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇಕಡಾ 5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.
ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್..!
ಇನ್ನೂ ಜೂನ್ 30ರ ಒಳಗೆ ಈ ಒಂದು ಕೆಲಸ ಮಾಡಿಲ್ಲ ಅಂದರೆ ಜುಲೈ 1ರಿಂದ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎನ್ನುವ ಹಾಗಿತ್ತು. ಆದರೆ ಈಗ ಕೇಂದ್ರ ಸರ್ಕಾರ ಈ ಗಡುವನ್ನು ಹೆಚ್ಚಳ ಮಾಡಿದ್ದು, ಸೆಪ್ಟೆಂಬರ್ 30ರ ವರೆಗು ಆಧಾರ್ ಲಿಂಕ್ ಮಾಡುವುದಕ್ಕೆ ಸಮಯ ನೀಡಲಾಗಿದೆ.
ಇನ್ನು 3 ತಿಂಗಳ ಒಳಗೆ ಆಧಾರ್ ಲಿಂಕ್ ಮಾಡಿಲ್ಲ ಎಂದರೆ, ರೇಷನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ.. ಹಾಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು?
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಹಾಗೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದ್ದರೆ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಅರ್ಜಿ ಸಲ್ಲಿಕೆ ಪ್ರಾರಂಭವಾದ ತಕ್ಷಣ ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ.
ಈಗ ನೀವು ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
ಒಂದು ವೇಳೆ ನೀವೇನಾದರೂ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಈ ಕೆಳಗೆ ನೀಡಿದಂತಹ ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಲಿಂಕ್ ಅನ್ನು ಬಳಸಿಕೊಂಡು ನೀವು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಎಲ್ಲ ದಾಖಲೆಗಳನ್ನು ಭರ್ತಿ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ನಾವು ಈ ಕೆಳಗೆ ನೀಡಿರುವ ಆನ್ಲೈನ್ ಸೆಂಟರ್ ಮಾತ್ರ ನೀವು ಹೋಗಿ ಅರ್ಜಿಯನ್ನು ಸಲ್ಲಿಸಬಹುದು
- ಗ್ರಾಮ ಒನ್ ಸೆಂಟರ್
- ಸಿಎಸ್ಸಿ ಸೆಂಟರ್
- ಬಾಪೂಜಿ ಸೇವಾ ಕೇಂದ್ರ
- ಬೆಂಗಳೂರು ಒನ್
- ಕರ್ನಾಟಕ ಒನ್