ಬೆಂಗಳೂರು: ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ರಾಮನಗರಕ್ಕೆ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಸನ್ನ ಕುಮಾರ್ ತಿಳಿಸಿದರು.
Krushi Mela: ಜಿಕೆವಿಕೆಯಲ್ಲಿ ನಡೆಯುತ್ತಿರುವ 4 ದಿನಗಳ ಕೃಷಿ ಮೇಳಕ್ಕೆ ಇಂದು ತೆರೆ!
ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಈ ಬಾರಿ ಕಳೆದೆರಡು ಕಂತಿಗಿಂತಲೂ ಹೆಚ್ಚಿನ ಫಲಾನುಭವಿಗಳು ಇರುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಜಿಲ್ಲೆಯಲ್ಲಿ 3 ನೇ ಕಂತಿನ ಹಣ ಬಿಡುಗಡೆಯಾಗಲಿದೆ.
ಗೃಹಲಕ್ಷಿ ಯೋಜನೆಯಡಿ ಕಳೆದ 2ಕಂತಿನಲ್ಲಿ ಹಣ ಬಾರದ ಫಲಾನುಭವಿಗಳಿಗೆ ಈ ಕಂತಿನಲ್ಲಿ ಹಣ ಬಿಡುಗಡೆಯಾಗಲಿದೆ. ತಾಂತ್ರಿಕ ದೋಷದಿಂದಾಗಿ ಹಣ ಸಂದಾಯವಾಗಿರಲಿಲ್ಲ ಇದೀಗ ತಾಂತ್ರಿಕ ಸಮಸ್ಯೆ ಬಗೆಹರಿದಿದೆ ಎಂದು ಹೇಳಿದ್ದಾರೆ.