ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ವನಿತಾ ಪಡೆ ವಿಂಡೀಸ್ ವಿರುದ್ಧ ಗೆಲುವಿನ ಮೂಲಕ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 13.2 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 44 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ ಕೇವಲ 1 ವಿಕೆಟ್ ಕಳೆದುಕೊಂಡು 4.2 ಓವರ್ಗಳಲ್ಲಿ ಜಯದ ಬಗೆ ಬೀರಿತು. ವಿಂಡೀಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಭಾರತ ತಂಡವು ತನ್ನ ಇತರ ಎದುರಾಳಿಗಳಿಗೂ ಸ್ಪಷ್ಟ ಸಂದೇಶವನ್ನು ನೀಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿ ಪೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಡೀ ತಂಡ 13.2 ಓವರ್ಗಳಲ್ಲಿ 44 ರನ್ ಗಳಿಸಿ ಆಲೌಟ್ ಆಯಿತು. ಈ ಮೂಲಕ ವಿಂಡೀಸ್ ತಂಡ ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಕೋರ್ಗೆ ಆಲೌಟ್ ಆದ ಬೇಡದ ದಾಖಲೆಯನ್ನು ಬರೆಯಿತು. ಗೆಲುವಿಗೆ 45 ರನ್ಗಳ ಗುರಿ ಪಡೆದಿದ್ದ ಭಾರತ ಕೇವಲ 4.2 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
45 ರನ್ಗಳ ಸುಲಭ ಗುರಿ ಬೆನ್ನತ್ತಿದ ಭಾರತ 4 ರನ್ ಗಳಿಸುವಷ್ಟರಲ್ಲಿ ತನ್ನ ಏಕೈಕ ವಿಕೆಟ್ ಕಳೆದುಕೊಂಡಿತು. ಆದರೆ ಆ ಬಳಿಕ ಭಾರತದ ಬ್ಯಾಟ್ಸ್ಮನ್ಗಳು ವೆಸ್ಟ್ ಇಂಡೀಸ್ಗೆ ವಿಕೆಟ್ ಪಡೆಯುವ ಎರಡನೇ ಅವಕಾಶವನ್ನೇ ನೀಡಲಿಲ್ಲ. ಎರಡನೇ ವಿಕೆಟ್ಗೆ ಕಮಲಿನಿ ಮತ್ತು ಚಾಲ್ಕೆ ನಡುವೆ 43 ರನ್ಗಳ ಅಜೇಯ ಪಾಲುದಾರಿಕೆ ಇತ್ತು. ಈ ಇಬ್ಬರೂ ಬ್ಯಾಟ್ಸ್ಮನ್ಗಳು ಪಂದ್ಯ ಮುಗಿಸಿದ ಬಳಿಕ ಪೆವಿಲಿಯನ್ ಸೇರಿಕೊಂಡರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವನ್ನು 9 ವಿಕೆಟ್ಗಳಿಂದ ಸೋಲಿಸುವಲ್ಲಿ ಭಾರತ ಯಶಸ್ವಿಯಾಯಿತು.