ಬೆಂಗಳೂರು:- ನೈಸ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ದಂಪತಿಗೆ ಅತಿ ವೇಗವಾಗಿ ಬಂದ ಗೂಡ್ಸ್ ವಾಹನವು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಹಿನ್ನೆಲೆ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಘಟನೆ ನಡೆದಿದೆ. ನಿರ್ಮಲಾ (45) ಬೈಯಣ್ಣ (55) ಮೃತ ದಂಪತಿ ಆಗಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗೂಡ್ಸ್ ವಾಹನ ಅತಿವೇಗವಾಗಿ ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ನಿಂದ ರಸ್ತೆಗೆ ಬಿದ್ದು ತೀವ್ರ ಗಾಯದಿಂದ ಬಳಲುತ್ತಿದ್ದ ಗಾಯಾಳು ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೂ ಯಾರೊಬ್ಬರು ಕೂಡ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಲಭ್ಯವಾಗಿಲ್ಲ. ಇನ್ನು ಗೂಡ್ಸ್ ವಾಹನದಲ್ಲಿಯೂ ಆವರನ್ನು ಆಸ್ಪತ್ರೆಗೆ ಸೇರಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಸಂಬಂಧ ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದಂಪತಿ ಇಂದು ಬೆಳಗ್ಗೆ ಹಾರಗದ್ದೆಗೆ ಗೃಹ ಪ್ರವೇಶಕ್ಕೆ ಹೋಗಿದ್ದರು. 11 ಗಂಟೆಯಲ್ಲಿ ಗೃಹ ಪ್ರವೇಶ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಕ್ಯಾಂಟರ್ ಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದು, ತಲೆಗೆ ಪೆಟ್ಟಾಗಿತ್ತು. ಇವರು ವಿಜಯನಗರ ಮೂಲದ ದಂಪತಿಯಾಗಿದ್ದಾರೆ. ಇನ್ನು ಬೈಯ್ಯಣ್ಣ ಹೊಸಹಳ್ಳಿಯ ದೇವಸ್ಥಾನವೊಂದರ ಟ್ರಸ್ಟಿಯಾಗಿದ್ದರು. ಪತಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಕೂಡ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು. ಬೈಯ್ಯಣ್ಣ ಈ ಹಿಂದೆ ಕೂಡ ಎರಡು ಬಾರಿ ಅಪಘಾತಕ್ಕೊಳಗಾಗಿದ್ದರು. ಎರಡು ಬಾರಿಯೂ ಗಂಭೀರ ಗಾಯವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಈಗ ಮೂರನೇ ಬಾರಿ ಇಂದು ಆಕ್ಸಿಡೆಂಟ್ ಆಗಿದ್ದು, ದಂಪತಿ ಸಮೇತ ಮೃತರಾಗಿದ್ದಾರೆ
ಅಪಘಾತದಲ್ಲಿ ಮೃತಪಟ್ಟ ದಂಪತಿ ಮಕ್ಕಳು ತಂದೆ-ತಾಯಿ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.