ಬೆಂಗಳೂರು: ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದೆ. ಭಾಸ್ಕರ್ ರಾವ್ ಈ ಹಿಂದೆಯೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅವರ ಅರ್ಜಿಯನ್ನು ಸರ್ಕಾರ ಅನುಮೋದಿಸಿರುವ ಹಿನ್ನಲೆಯಲ್ಲಿ ಡಿಸೆಂಬರ್ 31ರಂದು ನಿವೃತ್ತಿ ಹೊಂದಲಿದ್ದಾರೆ. ಕುಟುಂಬದೊಂದಿಗೆ ಕಾಲ ಕಳೆಯಲು ನಿವೃತ್ತಿ ಪಡೆಯೋದಾಗಿ ಭಾಸ್ಕರ್ ರಾವ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಇದರ ಜೊತೆಗೆ ಭಾಸ್ಕರ್ ರಾವ್ ರಾಜಕೀಯ ಸೇರ್ಪಡೆಗೊಳ್ಳುವ ವಿಷಯಗಳು ಕೇಳಿಬರುತ್ತಿವೆ
