ಧಾರವಾಡ:- ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಸರ್ಕಾರಿ ಬಸ್ ನುಗ್ಗಿದ ಘಟನೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿ ಜರುಗಿದೆ.
ಅದೃಷ್ಟವಶಾತ್ ಘಟನೆಯಿಂದ ಭಾರೀ ಅನಾಹುತ ತಪ್ಪಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್, ಹೊಲಕ್ಕೆ ನುಗ್ಗಿದೆ. ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿ 4 ಘಟನೆ ಜರುಗಿದೆ. ಧಾರವಾಡದಿಂದ ಸವದತ್ತಿಗೆ ಬಸ್ ತೆರಳುತ್ತಿತ್ತು. ಬಸ್ ನಲ್ಲಿ 40 ಜನರು ಪ್ರಯಾಣ ಮಾಡುತ್ತಿದ್ದರು. ಘಟನೆಯಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.