ಬೆಂಗಳೂರು:-ಎನ್ಪಿಎಸ್ ರದ್ದತಿಗೆ ಸರ್ಕಾರಿ ನೌಕರರ ಪಟ್ಟು ಹಿಡಿದಿದ್ದು, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿದೆ.
ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು: ಆರ್ ಅಶೋಕ್!
ಎನ್ಪಿಎಸ್ ನೌಕರರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ. 2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್ಪಿಎಸ್ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದತಿ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. NPS ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಅವರು, ಎನ್ಪಿಎಸ್ ರದ್ದುಪಡಿಸಿದ ಇತರೆ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಹೇಳಿದ್ದರು.
ಎನ್ಪಿಎಸ್ ಎಂದರೇನು?
ಎನ್ಪಿಎಸ್ ಎಂಬುದು ರಾಷ್ಟ್ರೀಯ ಅಥವಾ ಹೊಸ ಪಿಂಚಣಿ ಯೋಜನೆಯಾಗಿದ್ದು, ಪಿಂಚಣಿ ಮತ್ತು ಹೂಡಿಕೆಗಳ ಸಂಯೋಜನೆಯಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ಉದ್ಯೋಗಿ ಕೂಡ ಮೂಲ ವೇತನದ ಶೇಕಡಾ 10ರಷ್ಟನ್ನು ನಿವೃತ್ತಿ ನಿಧಿಗೆ ಕೊಡುಗೆಯಾಗಿ ನೀಡಬೇಕು. ಉದ್ಯೋಗದಾತರು ಮೂಲ ವೇತನದ ಶೇಕಡಾ 14ರಷ್ಟನ್ನು ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಯೋಜನೆಯ ದೊಡ್ಡ ಪ್ರಯೋಜನವೆಂದರೆ, ಖಾಸಗಿ ಕ್ಷೇತ್ರದ ಉದ್ಯೋಗಿಗೂ ಸೇರಿಕೊಳ್ಳಲು ಅವಕಾಶವಿದೆ. ನಿವೃತ್ತಿಯ ನಂತರ ನಾಗರಿಕರಿಗೆ ಹಣಕಾಸು ಭದ್ರತೆಯನ್ನು ಒದಗಿಸುವುದಕ್ಕಾಗಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತಿದೆ