ಹೈದರಾಬಾದ್: ಉತ್ತರ ಪ್ರದೇಶ (Uttar Pradesh) ಸರ್ಕಾರವು ಹಲಾಲ್ (Halal) ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದೆ. ಈ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು, ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
Bengaluru: ನಿವಾಸಿಗಳೇ, ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದೀರಾ!? – ಇಲ್ಲಿದೆ ಗುಡ್ ನ್ಯೂಸ್
ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಆರ್ಎಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಂವಿಧಾನವು ಯಾರಿಗೂ ವಿಶೇಷ ಕೊಡುಗೆ ನೀಡಲು ಅವಕಾಶ ನೀಡುವುದಿಲ್ಲ. ಧಾರ್ಮಿಕ ಮೀಸಲಾತಿಯನ್ನು ಕೆಸಿಆರ್ ನೀಡಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಇರುವ 4% ಮೀಸಲಾತಿಯನ್ನೂ ನಿಷೇಧಿಸುತ್ತೇವೆ. ಅದನ್ನು ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗದ ಜನರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.