ಬೆಳಗಾವಿ:- ಕೆಎಫ್ ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿ ಮಾತನಾಡಿದ ಅವರು, ಮಂಗನ ಕಾಯಿಲೆ ತಡೆಗೆ ಶೀಘ್ರದಲ್ಲೇ ಹೊಸ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಮಲೆನಾಡಿಗರನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್ ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ.
ಹಾಗಾಗಿ, ಐಸಿಎಂಆರ್ ನೊಂದಿಗೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ ಎಂದರು. ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಲಸಿಕೆ ವಿತರಣೆಯನ್ನು ಸ್ಥಗಿತ ಮಾಡಲಾಗಿದೆ. ಏಕೆಂದರೆ ಈ ಲಸಿಕೆ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಖಾಸಗಿ ಕಂಪನಿಯ ಸಹಯೋಗದೊಂದಿಗೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಮಂಗನ ಕಾಯಿಲೆ ಅತೀ ಕಡಿಮೆ ಜನರಿಗೆ ಬಾಸುತ್ತಿರುವ ಕಾರಣದಿಂದಲೇ ಇತರೆ ಕಂಪನಿಗಳು ಈ ಲಸಿಕೆ ಕಂಡು ಹಿಡಿಯಲು ಮುಂದಾಗುತ್ತಿಲ್ಲ.ಆದರೂ, ಸರ್ಕಾರ ಸಂಶೋಧನೆ ಗೆ ಧನ ಸಹಾಯ ನೀಡುವುದಾಗಿಯೂ ತಿಳಿಸಿದ್ದು, ಶೀಘ್ರವಾಗಿ ಹೊಸ ಲಸಿಕೆಯನ್ನು ರೋಗಿಗಳಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.