ಬೆಂಗಳೂರು: ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್. ಎಂ. ಕೃಷ್ಣ (92) ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅದಲ್ಲದೆ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.
Tuesday Mistake: ಮಂಗಳವಾರ ಏನೇ ಕಷ್ಟ ಬಂದ್ರೂ ಈ ತಪ್ಪುಗಳನ್ನ ಮಾತ್ರ ಮಾಡ್ಬೇಡಿ! ಕಷ್ಟಗಳು ಬೆನ್ನು ಬೀಳುತ್ತೆ
ಎಸ್ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಕೆ ಶಿವಕುಮಾರ್ ಬಳಿಕ ಮಾಧ್ಯಮದ ಜೊತೆ ಅಂತ್ಯಸಂಸ್ಕಾರ ವ್ಯವಸ್ಥೆ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದ್ದಾರೆ. ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಶೋಕಾಚರಣೆ ಇರಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಸ್ಎಂ ಕೃಷ್ಣ ವಿಧಿವಶರಾದ ಬೆನ್ನಲ್ಲೇ ಹುಟ್ಟೂರಾಗಿರುವ ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದೆ.