ಬೆಂಗಳೂರು: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯಲ್ಲಿಯೇ ಬಾಣಂತಿಯೊಬ್ಬಳು ಮೃತಪಟ್ಟ ಬಗ್ಗೆ ವರದಿಯಾಗಿತ್ತು.
ಆದ್ದರಿಂದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
Chanakya Niti: ನಿಮಗಿರುವ ಕಷ್ಟಗಳನ್ನು ಎದುರಿಸಲು ಚಾಣಕ್ಯ ಹೇಳಿದ ಈ 10 ವಿಷಯಗಳನ್ನು ನೆನಪಿಡಿ ಸಾಕು.!
ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.