ಕೊಪ್ಪಳ:- ಕಳೆದ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ಕೊಪ್ಪಳ ಜನರ ಹೋರಾಟಕ್ಕೆ ರಾಜ್ಯ ಸರ್ಕಾರ ಮಿಡಿದಿದ್ದು, ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ಸ್ವತ ಗವಿಮಠದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಪ್ಯಾಕ್ಟರಿ ಆರಂಭವಾಗಬಾರದು ಎಂದು ಬೀದಿಗಳಿದು ಹೋರಾಟ ಮಾಡಿದ್ದಾರೆ. ಈ ಸಂಬಂಧ ಇಂದು ಜನಪ್ರತಿನಿಧಿಗಳು ಮತ್ತು ಹೋರಾಟಗಾರರ ನಿಯೋಗ, ಸಿಎಂ ಭೇಟಿ ಮಾಡಿದ್ದು, ಕೂಡಲೇ ಫ್ಯಾಕ್ಟರಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲಾ ಜನರು ಹೋರಾಟಕ್ಕೆ ಜಯ ಸಿಕ್ಕಂತಾಗಿದ್ದು, ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.
ಕೊಪ್ಪಳ ನಗರದಿಂದ ಕೂಗಳತೆ ದೂರದಲ್ಲಿ, ರಾಜ್ಯದ ಎರಡನೇ ಅತಿ ದೊಡ್ಡ ಸ್ಟೀಲ್ ಪ್ಯಾಕ್ಟರಿ ಆರಂಭಕ್ಕೆ ಬಲ್ಡೋಟ ಸಂಸ್ಥೆ ಮುಂದಾಗಿದೆ. ಬರೋಬ್ಬರಿ 54 ಸಾವಿರ ಕೋಟಿ ವೆಚ್ಚದಲ್ಲಿ ವಾರ್ಷಿಕ 10.50 ಮಿಲಿಯನ್ ಟನ್ ಕಬ್ಬಿಣ ಉತ್ಪಾಧನೆ ಸಾಮಾರ್ಥ್ಯದ ಘಟಕದ ನಿರ್ಮಾಣಕ್ಕೆ ಸಿದ್ದತೆ ಜೋರಾಗಿ ನಡೆಸಿದೆ. ಈಗಾಗಲೇ ಅನೇಕ ವರ್ಷಗಳ ಹಿಂದೆಯೇ 1034 ಎಕರೆ ಭೂಮಿಯನ್ನು ಕಂಪನಿ ರೈತರಿಂದ ಪಡೆದಿದ್ದು, ಇದೀಗ ಘಟಕ ಆರಂಭದ ಕೆಲಸ ಆರಂಭಿಸಿದೆ. ಆದ್ರೆ ಇದೀಗ ಕಾಮಗಾರಿ ನಡೆಸದಂತೆ ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.