ಕಲಬುರಗಿ: ಪಕ್ಷ ನಾಯಕ ಆರ್ ಅಶೋಕ ಅವರು ಇಂದು ಕಲಬುರಗಿ ಜಿಲ್ಲೆಯಲ್ಲಿಂದು ಬರ ವೀಕ್ಷಣೆ ಮಾಡಿದ್ದಾರೆ. ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಕಲಬುರಗಿ ಪ್ರವಾಸ ಕೈಗೊಂಡಿದ್ದು, ಗ್ರಾಮೀಣ ಮತಕ್ಷೇತ್ರದ ಮೂಕಿ ತಾಂಡಾಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಂದ ತೊಗರಿ ಹಾನಿ ಕುರಿತು ಮಾಹಿತಿ ಸಂಗ್ರಹ ಮಾಡಿದರು.
ಇನ್ನೂ ಬರ ವೀಕ್ಷಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರಕಾರದ ಖಜಾನೆ ಖಾಲಿ ಆಗಿ ಪರಿಹಾರ ಕೊಡಲು ಅವರ ಬಳಿ ದುಡ್ಡಿಲ್ಲ. ಪಂಚರಾಜ್ಯ ಚುನಾವಣೆ ಹೋಗಿ ರಾಜ್ಯದ ಜನರ ಸಮಸ್ಯೆಗಳನ್ನು ಮರೆತಿದ್ದಾರೆ. ರೈತರ ಸಂಕಷ್ಟವನ್ನು ಯಾರೋಬ್ಬ ಜನಪ್ರತಿನಿಧಿಗಳು ಕೇಳುತ್ತಿಲ್ಲ, ಬೆಳಗಾವಿ ಅಧಿವೇಶನದಲ್ಲಿ ಇದೇ ಮೊದಲ ವಿಷಯ ಚರ್ಚೆ ಮಾಡುವೆ ಎಂದು ಕಲಬುರಗಿಯಲ್ಲಿ ವಿಪಕ್ಷ ನಾಯಕ R ಅಶೋಕ್ ಹೇಳಿದರು.