ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿ ವಿಚಾರವಾಗಿ ಜನರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಸಾಲ ಮಾಡಿದವರು ಆತ್ಮಹತ್ಯೆಗೆ ಶರಣಾಗುವ ವಿದ್ಯಮಾನ ಹೆಚ್ಚಳವಾಗುತ್ತಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ.
Post Office Jobs: 10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ..! ತಿಂಗಳಿಗೆ ₹ 30,100 ಸಂಬಳ
ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಸಿಎಂ ಸಭೆ ಮಾಡಲು ಇಷ್ಟು ದಿನ ಬೇಕಾಯ್ತಾ? ಪೊಲೀಸರು, ಅಧಿಕಾರಿಗಳು ಇಲ್ವಾ ಎಂದು ಕಿಡಿಕಾರಿದರು. ಮೈಕ್ರೋ ಫೈನಾನ್ಸ್ನಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇತಿಮಿತಿಯಿಲ್ಲದೆ ಮೈಕ್ರೋ ಫೈನಾನ್ಸ್ ಹಾವಳಿ ನಡೆಯುತ್ತಿದೆ. ಮೈಕ್ರೋ ಫೈನಾನ್ಸ್ನಿಂದ ಬಡವರಿಗೆ ವಂಚನೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.