ಬೆಂಗಳೂರು:- ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಟೀಂ ಇಂಡಿಯಾ ನೂತನ ಕೋಚ್ ಆಗಿ ಗಂಭೀರ್ʼಗೆ ಏನೆಲ್ಲ ಕ್ರೇಜ್ ಇದೆ ಗೊತ್ತಾ ನಿಮಗೆ..?
ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆ ಅಡಿಯಲ್ಲಿ 2018ರ ಏಪ್ರಿಲ್ 1ರಿಂದ 2020ರ ಮಾರ್ಚ್ 31ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡುವ ಕುರಿತು ರಾಜ್ಯ ಸರ್ಕಾರವು ಗುರುವಾರ ಆದೇಶ ಹೊರಡಿಸಿದೆ.
01/04/2018ರಿಂದ 31/03/2020ರ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ 80 ರೂಪಾಯಿಯಂತೆ ಲಾಭಾಂಶ (Bonus) ನೀಡುವುದು.
ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ 01/04/2020ರಿಂದ 31/03/2022ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ 80 ರೂ.ನಂತೆ ಮಧ್ಯಂತರ ಲಾಭಾಂಶ (Interim Bonus) ನೀಡುವುದು.
ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958ರ ನಿಯಮ-22ರನ್ವಯ ವಿಮಾ ಮೌಲ್ಯಮಾಪನವನ್ನು ದೈವಾರ್ಷಿಕವಾಗಿ ಮಾಡಿಸಬೇಕಾಗಿದ್ದು, ಅದರನ್ವಯ 2018-2020ನೇ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ವಿಮಾ ಪಾಲಿಸಿಗಳ ಮೌಲ್ಯಮಾಪನವನ್ನು ನಡೆಸಿ, ಅಧಿಲಾಭಾಂಶವನ್ನು ಘೋಷಿಸಲು ಅನುವಾಗುವಂತೆ ಮೌಲ್ಯಮಾಪನ ಕಾರ್ಯ ಕೈಗೊಳ್ಳಲು ವಿಮಾ ಗಣಕಕಾರರನ್ನು ನೇಮಿಸಲಾಗಿತ್ತು. ವಿಮಾ ಗಣಕಕಾರರು 2018-2020ನೇ ಅವಧಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಮೌಲ್ಯಮಾಪನ ವರದಿ ಸಲ್ಲಿಸಿದ್ದರು.