ಬೆಂಗಳೂರು;– 7ನೇ ರಾಜ್ಯ ವೇತನ ಆಯೋಗದ ಕಾಲಾವಧಿ ಮತ್ತೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಮಾ.15, 2024 ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರು ವೇತನ ಪರಿಷ್ಕರಣೆ ಸಂಬಂಧ ಮತ್ತಷ್ಟು ದಿನಗಳ ಕಾಲ ಕಾಯುವಂತಾಗಿದೆ.
ಏಳನೇ ರಾಜ್ಯ ವೇತನ ಆಯೋಗ ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು 15-03-2024 ರವರೆಗೆ ವಿಸ್ತರಿಸಿ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು 19-11-2022ರಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ಬಿಜೆಪಿ ಸರ್ಕಾರ ರಚಿಸಿತ್ತು. ಬಳಿಕ 15-05-2023ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ ಮತ್ತೆ ಆಯೋಗದ ಕಾಲಾವಧಿಯನ್ನು ನವೆಂಬರ್ 18 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೆ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2024 ಮಾರ್ಚ್ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.