ಬೆಂಗಳೂರು: ಕೋವಿಡ್ ಮೂರನೇ ಅಲೆ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೊಸ ಐಸಿಯುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.ಕಳೆದ ವರ್ಷ ಹಾಕಲಾಗಿದ್ದ ಆಕ್ಸಿಜನ್ ಪ್ಲಾಂಟ್ ಅನ್ನು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಔಷಧಿಗಳನ್ನು ತಯಾರಿಸಿ ಕೊಳ್ಳಲಾಗಿದೆ.
ಮೊದಲ ಡೋಸ್ ವ್ಯಾಕ್ಸಿನೇಷನ್ ಶೇ.97ರಷ್ಟಾಗಿದ್ದು, ಎರಡನೆ ಡೋಸ್ ವ್ಯಾಕ್ಸಿನೇಷನ್ ಶೇ.76 ರಷ್ಟಾಗಿದೆ. ಇತರೆ ರಾಜ್ಯಗಳಿಗೆ ಹೋ ಲಿಸಿದರೆ ಇದೊಂದು ದಾಖಲೆ ಎಂದು ಹೇಳಿದರು. ಇನ್ನೂ ವ್ಯಾಕ್ಸಿನೇಷನ್ ಶೇ.100ರಷ್ಟು ಆದರೆ ಮಾತ್ರ ಕೋವಿಡ್ ನಿಂದ ಪಾರಾಗ ಬಹುದು. ಇದಕ್ಕಾಗಿ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಾ ಬರುತ್ತಿದೆ. ಇದರ ಜೊತೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ಗು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
