ಬೆಂಗಳೂರು:– ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸುವುದೇ ಸರ್ಕಾರದ ಸಂಕಲ್ಪ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ.
ನನ್ನ ಪ್ರಾಣಕ್ಕೆ ಹಾನಿ ಆದ್ರೆ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ
ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ.
ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಭರವಸೆ ನೀಡಿದ್ದಾರೆ.
ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀಣ ಮಂಜೂರು ಮಾಡಿದ್ದಾರೆ.
ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ರೂ ದುರಸ್ತಿಯಾಗಿಲ್ಲ.
ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದೆ. ಇದಕ್ಕೆಂದು ಪ್ರಾಯೋಗಿಕ ಆಪ್ ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.