ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದ್ದು, ಹೀಗಾಗಿ ರಾಜ್ಯದ ಜನ ಲಸಿಕೆ ಪಡೆಯಬೇಕು. ಕೊರೊನಾದಿಂದ ಮುಕ್ತವಾಗಲು ಲಸಿಕೆ ಮುಖ್ಯ. ಇನ್ನೂ ಲಸಿಕಾ ಅಭಿಯಾನದಲ್ಲಿ ಕರ್ನಾಟಕ ಮುಂದಿದ್ದು, ಈ ಕಾರ್ಯಕ್ಕೆ ಸಿಎಂ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ಲಸಿಕೆ ಪಡೆಯಬೇಕು. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದರು.
