ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ (Forest Encroachment) ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
Waynadu Ladslide: ಸೈನಿಕರಿಗೊಂದು ಸಲಾಂ: ಕೇವಲ 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ!
ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದೆ.