ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಶೋಕಾಸ್ ನೋಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ: ಸಿಎಂ ಸಿದ್ದರಾಮಯ್ಯ
ನಗರದಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.
ಕೆಲವೇ ದಿನ ಹಿಂದಷ್ಟೇ ಮಾತನಾಡಿದ್ದ ಪರಮೇಶ್ವರ್, ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದಿದ್ದರು. ಇದೀಗ ಯೂಟರ್ನ್ ಹೊಡೆದಿದ್ದಾರೆ.