ಕಲಬುರಗಿ :ಈ ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೆ ಒಂದೇ ಒಂದು ಹೊಸ ಪಡಿತರ ಚೀಟಿ ನೀಡಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗು ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತಲ್ಕೂರ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ತೆಲ್ಕೂರ್ ಹೊಸ ಪಡಿತರ ಚೀಟಿ ಪಡೆಯಬೇಕು ಎಂದು ರಾಜ್ಯದಲ್ಲಿ ಲಕ್ಷಾಂತರ ಜನರು ಅರ್ಜಿ ಸಲ್ಲಿಸಿದ್ದಾರೆ. ಎಲ್ಲಿ ಬಡವರಿಗೆ ಅನ್ನಭಾಗ್ಯದ ಹಣ ಹಾಗೂ ಗೃಹಲಕ್ಷ್ಮಿ ಹಣ ನೀಡಬೇಕಾಗಿ ಬರುತ್ತದೆ ಎನ್ನುವ ಭಯದಲ್ಲಿ ಸುಮಾರು 2ಲಕ್ಷ 95 ಸಾವಿರ ಕುಟುಂಬಗಳಿಗೆ ಪಡಿತರ ಚೀಟಿ ನೀಡದೇ ಬಾಕಿ ಉಳಿಸಿಕೊಂಡಂತೆ ಕಾಣುತ್ತಿದೆ ಅಂತ ಆರೋಪಿಸಿದ್ದಾರೆ…


