ಬೆಂಗಳೂರು ;- ಬಿಬಿಎಂಪಿ ವಾರ್ಡ್ ಪುನರ್ ವಿಂಗಡನಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ಮುಖ್ಯ ಆಯುಕ್ತ, ಬಿಡಿಎ ಆಯುಕ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರನ್ನು ಸಮಿತಿ ನೇಮಿಸಿ ಆದೇಶ ಹೊರಡಿಸಲಾಗಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು ಇವರನ್ನೊಳಗೊಂಡ ಆಯೋಗ ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ವಾರ್ಡ್ ಪುನರ್ ವಿಂಗಡಣೆಯನ್ನು ಪ್ರಶ್ನಿಸಲಾಗಿತ್ತು. ಕಾಂಗ್ರೆಸ್ನ ಮಾಜಿ ಮೇಯರ್, ಮುಖಂಡರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ಹೊಸದಾಗಿ ವಾರ್ಡ್ ಪುನರ್ ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು.
ಹೈಕೋರ್ಟ್ ಸೂಚನೆ ಸಿಕ್ಕ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಆ ಮೂಲಕ ಹಿಂದಿನ ಸರ್ಕಾರ ಮಾಡಿದ್ದ ಪುನರ್ ವಿಂಗಡಣೆಯನ್ನು ಬದಲಾಯಿಸಹೊರಟಿದೆ.
