ಬೆಂಗಳೂರು:– ಕಾಂತರಾಜು ವರದಿ ಸ್ವೀಕರಿಸಲು ಸರ್ಕಾರ ಸಿದ್ಧ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದು, ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಕೋಟ್ಯಂತರ ರೂಪಾಯಿ ವೆಚ್ಚ ಮಾಡಿಸಿ ಸಮೀಕ್ಷೆ ಮಾಡಿಸಿರುವ ವರದಿಯನ್ನು ಸ್ವೀಕಾರ ಮಾಡಲ್ಲ ಎನ್ನಲು ಸಾಧ್ಯವೇ?, ಸರ್ಕಾರದಲ್ಲಿ ಸ್ವೀಕಾರ ಮಾಡಲಾಗಿರುವ ಇತರೆ ಹತ್ತಾರು ವರದಿಗಳಿವೆ. ಯಾವುದೇ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ. ಆ ಬಗ್ಗೆ ಚರ್ಚೆ ನಡೆದು ನಿರ್ಧಾರ ಆಗಲಿದೆ. ವರದಿ ಸ್ವೀಕಾರವಾಗದೆ ಕಾಂತರಾಜು ವರದಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.