ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿ ಮೇಲೆ ಭಯೊತ್ಪಾದಕರು ದಾಳಿ ನಡೆಸಲು ಮುಂದಾಗಿದ್ದು ಅತ್ಯಂತ ಆಘಾತಕಾರಿ ಸಂಗತಿ, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು
ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಕೃತ್ಯದಲ್ಲಿ ಭಾಗಿಯಾಗಿರುವ ಉಗ್ರರಿಗೆ ಕಠಿಣ ಶಿಕ್ಷೆಯಾಗಲು ರಾಜ್ಯ ಸರ್ಕಾರ ಎನ್ಐಎ ಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ ತನಿಖೆಗೆ ಸಹಕಾರ ನೀಡಬೇಕು.