ಬೆಂಗಳೂರು: ಅನ್ನಭಾಗ್ಯದ ಬದಲು ಹಸೀನಾ ಭಾಗ್ಯವನ್ನು ಜಾರಿಗೊಳಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡವರ ಅನ್ನ ಕಸಿದುಕೊಂಡು ರಾಜ್ಯವನ್ನು ನರಕ ಮಾಡಹೊರಟಿದೆ.
ತಿಂಗಳಿಗೆ ಎರಡು ಮೂರು ಸಾವಿರ ರೂಪಾಯಿ ಕೂಡ ಸಂಪಾದಿಸಿದ ರಾಜ್ಯದ ಕಟ್ಟಕಡೆಯ ಬಡವರ ರೇಷನ್ ಕಾರ್ಡನ್ನು ಸರ್ಕಾರ ಕಿತ್ತುಕೊಂಡಿದೆ, ಪಡಿತರ ಚೀಟಿಗಾಗಿ ಕೆಲವರು ಮೂರು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ಸಿಕ್ಕಿಲ್ಲ,
ಸಾರ್ವಜನಿಕರೇ ಗಮನಿಸಿ.. ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್!
ಈಗ ಕಾರ್ಡ್ ರದ್ದಾದವರು ಸಹ ಹೊಸ ಕಾರ್ಡ್ ಪಡೆಯಲು 3 ವರ್ಷಗಳ ಅಲೆದಾಡಬೇಕು, ಅನ್ನಭಾಗ್ಯದ ಬದಲು ಹಸೀನಾ ಭಾಗ್ಯವನ್ನು ಜಾರಿಗೊಳಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇನ್ನೂ ಕೇಂದ್ರ ಸರ್ಕಾರದ ಮಾನದಂಡದ ಪ್ರಕಾರ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ಕೇಂದ್ರ ಸರ್ಕಾರ 80 ಕೋಟಿ ಜನರಿಗೆ ಅನ್ನ ಕೊಡುತ್ತಿದೆ. ಬೇರೆ ರಾಜ್ಯದಲ್ಲಿ ಎಲ್ಲಿ ರೇಷನ್ ಕಾರ್ಡ್ ರದ್ದಾಗಿದೆ? ಕೇವಲ ಕರ್ನಾಟಕದಲ್ಲಿ ಮಾತ್ರ ಯಾಕೆ ರದ್ದಾಗಿದೆ?
ಪ್ರಧಾನಿ ನರೇಂದ್ರ ಮೋದಿ ಅಕ್ಕಿ ಕೊಟ್ಟರು. ರಾಜ್ಯ ಸರ್ಕಾರ ಹತ್ತು ಕೆಜಿ ಕೊಡುತ್ತೇವೆ ಎಂದು ಹೇಳಿದ್ದರು. ಬಳಿಕ ಅದರ ಬದಲು ಹಣ ಕೊಡುತ್ತೇವೆ ಎಂದರು. ಇವರಿಗೆ ಅಕ್ಕಿಗೆ ಹಣ ಕೊಡಲು ದುಡ್ಡಿಲ್ಲ. ಅದನ್ನು ಮರೆಮಾಚಲು ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದಾರೆ. ಇವರು ಪಾಪದ ಕೃತ್ಯ ಮಾಡಿದ್ದಾರೆ ಎಂದು ಹೇಳಿದರು.