ಬೆಂಗಳೂರು: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಶಾರ್ಟ್ ಸರ್ಕ್ಯೂಟ್: ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನ ಸಜೀವ ದಹನ
ನಗದರಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಇದೆ. ಆದ್ರೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೊದಲು ಜಾತಿ ಗಣತಿ ಜಾರಿಮಾಡಲಿ. ಇದರಿಂದ ಎಲ್ಲ ಸಮುದಾಯಕ್ಕೂ ಅನಕೂಲ ಇದೆ. ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ನುಡಿದಿದ್ದಾರೆ.
ರಾಹುಲ್ ಗಾಂಧಿ, ಪಕ್ಷದ ಪ್ರಣಾಳಿಕೆ ಬಗ್ಗೆ ಗೌರವ ಇರುವವರು ಇದಕ್ಕೆ ಬೆಂಬಲ ಕೋಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲಿ ಜಾತಿಗಣತಿ ಜಾರಿ ಬಗ್ಗೆ ಹೇಳಿದ್ದಾರೆ. ಪ್ರಪಂಚ ಬಿದ್ರೂ ಜಾತಿಗಣತಿ ಜಾರಿಯಾಗಬೇಕು ಅಂತ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಹ ಹೇಳಿದ್ದಾರೆ. ಹಾಗಾಗಿ, ಪ್ರಪಂಚ ತಲೆ ಕೆಳಗಾಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಬಿದ್ರೆ ಬಿಳಲಿ ಯಾಕೆ ಹೆದರಬೇಕು? ಸರ್ಕಾರಕ್ಕೆ ಕಂಟಕ ಎದುರಾದ್ರೆ ಆಗಲಿ, ಜಾತಿ ಜನಗಣತಿ ತರಬೇಕು. ನಮ್ಮ ಸರ್ಕಾರ ಬಂದಿರೋದು ಅಧಿಕಾರ ಅನುಭವಿಸುವುದಕ್ಕಲ್ಲ. ಕಾಂಗ್ರೆಸ್ ಪ್ರಣಾಳಿಕೆ ಮೇಲೆ ನಂಬಿಕೆ ಇರುವವರು ಜಾತಿ ಜನಗಣತಿ ಬೆಂಬಲಿಸಲಿ ಎಂದು ಹೇಳಿದ್ದಾರೆ.