ಬೀದರ್ : ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವತಿಯಿಂದ ಸಂತ ಸೇವಾಲಾಲ ಜಯಂತಿಯ ಅಂಗವಾಗಿ ಇಂದು ಬೀದರ್ ನಗರದಲ್ಲಿ ಭವ್ಯ ಮೆರವಣಿಗೆ ಜರುಗಿತು.
ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಅಲಂಕಾರ ಬೆಳ್ಳಿ ರಥದಲ್ಲಿ ಇರಿಸಿ. ಜಿಲ್ಲಾಧಿಕಾರಿಗಳ ಕಚೇರಿಯಿಂದ ಶಿವಾಜಿ ವೃತ್ತ, ಹರಳಯ್ಯ ವೃತ್ತ, ರೋಟರಿ ಕನ್ನಡಾಂಬೆ ವೃತ್ತದ ಮಾರ್ಗವಾಗಿ ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರ ರಂಗಮಂದಿರದವರೆಗೆ ಭವ್ಯ ಮೆರವಣಿಗೆಯನ್ನು ಜರುಗಿತ್ತು. ಲಮಾಣಿ ನೃತ್ಯ ನೋಡುಗರ ಗಮನ ಸೆಳೆಯಿತು. ಭವ್ಯ ಮೆರವಣಿಗೆಗಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗಿಯಾಗಿದ್ದವು. ರಾಜಕೀಯ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.