ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಭಾರತ ರಕ್ಷಣ ಸಚಿವಾಲಯ ಅಧೀನದ ನವರತ್ನ ಕಂಪನಿ ಮತ್ತು ಇಂಡಿಯಾದ ಪ್ರೀಮಿಯರ್ ಪ್ರೊಫೇಶನಲ್ ಇಲೆಕ್ಟ್ರಾನಿಕ್ಸ್ ಕಂಪನಿಯು ಆದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಉದ್ಯೋಗ ಪ್ರಕಟಣೆ ಹೊರಡಿಸಿದೆ. ಒಟ್ಟು 3 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್/ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಿಕಲ್ನಲ್ಲಿ ಬಿ.ಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 1, 2024ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 70,000-2,00,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 20, 2024
ಮ್ಯಾನೇಜರ್ (HR/NSS&CS)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ Po
ಬೆಂಗಳೂರು-560013
ಕರ್ನಾಟಕ