ಬೆಂಗಳೂರು: ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಗೂ ಈ ಸಂಬಂಧ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈಗಾಗಲೇ ಪ್ರಕಟಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ಆಯೋಗದ ಅಧ್ಯಕ್ಷರಾಗಿರಲಿದ್ದು, ಮೂವರು ಸದಸ್ಯರನ್ನು ನೇಮಕ ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ನೀತಿ ಸಂಹಿತೆಯನ್ನು ವಾಪಸ್ ಪಡೆದಿದೆ.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳು ದಿನಾಂಕ 3/6/2024ರಂದು CM ಸಿದ್ದರಾಮಯ್ಯ ಮತ್ತು DCM ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು, 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು.
ಮಲಗುವ ಮುನ್ನ ಒಂದು ಲೋಟ ಜಾಯಿಕಾಯಿ ಹಾಕಿದ ಹಾಲನ್ನು ಕುಡಿಯಿರಿ ಸಾಕು. ! ಆಮೇಲೆ ಚಮತ್ಕಾರ ನೋಡಿ
ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ. ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಶೀಘ್ರದಲ್ಲಿ 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನಗೊಳ್ಳಲಿದೆ.