ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೇಶಾದ್ಯಂತ 543 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಕೆಎಸ್ಸಾರ್ಟಿಸಿ ಅಧ್ಯಕ್ಷರ ಶ್ರೀನಿವಾಸ್ ನಿರ್ದೇಶನದಂತೆ ಸಾರಿಗೆ ನಗಮದ ನೌಕರರ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು ರೂ. 84 ಕೋಟಿ ಪಾವತಿಸಲು ಆದೇಶ ಹೊರಡಿಸಲಾಗಿದೆ. KSRTC ಸಿಬ್ಬಂದಿಗೆ (ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿ) 2022-23 ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ ರೂ.24 ಕೋಟಿಯನ್ನು, ಹಾಗೂ ಜುಲೈ-2022 ರಿಂದ ನವೆಂಬರ್-2022 ರ ಮಾಹೆಯ 5 ತಿಂಗಳು,
ಒಂದು ಕಾಲದಲ್ಲಿ ಕೊತ್ತಂಬರಿ ಸೊಪ್ಪು ಮಾರುತ್ತಿದ್ದ ವ್ಯಕ್ತಿ ಈಗ ಬಾಲಿವುಡ್ ಸ್ಟಾರ್ ನಟ..!
ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು ಮತ್ತು ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ ರೂ.54 ಕೋಟಿಯನ್ನು ಪಾವತಿಸಲು ಆದೇಶಿಸಲಾಗಿದೆ ಎಂದು ನಿಗಮದ ಮೂಲಗಳು ತಿಳಿಸಿವೆ. ಇದೇ ವೇಳೆ, ಜನವರಿ-2024 ರಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ ರೂ.6 ಕೋಟಿ ಮೊತ್ತವನ್ನು ಬಿಡುಗಡೆಗೊಳಿಸಲು ವ್ಯವಸ್ಥಾಪಕ ನಿರ್ದೇಶಕರು 15.03.2024ರಂದು ಆದೇಶಿಸಿದ್ದಾರೆ