ಬೆಂಗಳೂರು:- ಚುನಾವಣಾ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ನಾಲ್ಕೇ ದಿನಕ್ಕೆ ‘10,834 ಅರ್ಜಿ’ ಸಲ್ಲಿಕೆ ಆಗಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರು, ಯುವನಿಧಿ ಯೋಜನೆಯ ನೋಂದಣಿಗೆ ದಿನಾಂಕ 26-12-2023ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದ್ದರು ಎಂದಿದ್ದಾರೆ.
ಅರ್ಹ ಡಿಪ್ಲೋಮಾ, ಪದವೀಧರ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ದಾಖಲಿಸುವ ಪ್ರಕ್ರಿಯೆಯು ಆರಂಭಗೊಂಡಿದೆ. ಅರ್ಹ ಅಭ್ಯರ್ಥಿಗಳಇಂದ ನೋಂದಣಿಗಾಗಿ ಯುವನಿಧಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಪ್ರತಿ ದಿನ ಅರ್ಜಿ ಸಲ್ಲಿಸುತ್ತಿದ್ದು, ಯಾವುದೇ ಅಡಚಣೆ ಇಲ್ಲದೇ ಅಭ್ಯರ್ಥಿಗಳು ನೋಂದಣಿ ಮಾಡಲು ಅನುಕೂಲ ಕಲ್ಪಿಸಲಾಗಿದೆ. ದಿನಾಂಕ 29-12-2023ರ ಸಂಜೆ 6 ಗಂಟೆಯವರೆಗೆ 10,834 ಅರ್ಜಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಯುವನಿಧಿ ಯೋಜನೆಗೆ ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.