ಹುಬ್ಬಳ್ಳಿ :- ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12ರಿಂದ ಸಿಲುಕಿದ್ದ 41 ಕಾರ್ಮಿಕರನ್ನು ಕೊನೆಗೂ ಯಶಸ್ವಿಯಾಗಿ ಹೊರಗೆ ಕರೆತರಲಾಗಿದೆ.
ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಉತ್ತರಾಖಂಡದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೊರತರುವ ಕಾರ್ಯಾಚರಣೆ ಯಶಸ್ವಿಯಾಯಿತು ಎಂದು ತಿಳಿದು ಹರ್ಷವೆನಿಸಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಎದುರಾದ ಹಲವು ಅಡೆತಡೆಗಳು, ಸವಾಲುಗಳನ್ನು ಎದುರಿಸಿ ಇವರನ್ನು ರಕ್ಷಿಸಲಾಗಿದೆ. ಇವರನ್ನು ರಕ್ಷಿಸುವಲ್ಲಿ ಕಲ್ಪಿಸಲಾದ ಕ್ಲಿಷ್ಟಕರ ಮೂಲಸೌಕರ್ಯ ಹಾಗೂ ವೈಯಕ್ತಿಕ ಅಪಾಯವನ್ನೂ ಮೀರಿ ಕಾರ್ಮಿಕರನ್ನು ಹೊರತರುವಲ್ಲಿ ನಡೆಸಿದ ಸಾಹಸಕ್ಕೆ ಇಡೀ ತಂಡಕ್ಕೆ ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಕಾರ್ಮಿಕರ ಸ್ಟೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರಿಗೆ ಹೊಸ ಬದುಕು ಕೊಟ್ಟ ಎಲ್ಲ ರಕ್ಷಣಾ ಕಾರ್ಯಾಚರಣೆ ಯಲ್ಲಿ ತೊಡಗಿದ್ದ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ