ಬೆಂಗಳೂರು:-ಶೀಘ್ರವೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ. ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ಹೇಳಿದರು.
ಸಿ.ಟಿ.ರವಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ನಾನು ಇಂದು ಸದನಕ್ಕೆ ಬಂದಿದ್ದೇನೆ. ನಿಮಗೆ ಎಷ್ಟು ಮಾಹಿತಿ ಇದೆಯೋ ನನಗೂ ಅಷ್ಟೇ ಮಾಹಿತಿ ಇದೆ. ಎಥಿಕ್ಸ್ ಕಮಿಟಿಗೆ ಕೊಟ್ಟಿರೋ ವಿಚಾರದ ಬಗ್ಗೆ ಗೊತ್ತಿಲ್ಲ. ನಾನು ಆಸ್ಪತ್ರೆಯಲ್ಲಿ ಇದ್ದಾಗ ಹೊರಟ್ಟಿ ಅವರು ಆಸ್ಪತ್ರೆಗೆ ಬಂದಿದ್ದರು. ಇದರ ಬಗ್ಗೆ ಏನೂ ಮಾತನಾಡಿಲ್ಲ. ಯಾರಿಗೂ ಈ ರೀತಿ ಆಗಬಾರದು ಎಂದರು.