ಬೆಂಗಳೂರು ;– ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದರು. ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು. ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ. ಆರ್.ಸಿ ವಿದ್ಯುತ್ ಬೆಲೆ ಏರಿಸಿದೆ. ರಾಜಕೀಯ ಉದ್ದೇಶಕ್ಕೆ ಬಿಜೆಪಿ ತನ್ನ ತಪ್ಪನ್ನು ನಮ್ಮ ಸರ್ಕಾರದ ಮೇಲೆ ಹೇರುತ್ತಿದೆ ಎನ್ನುವ ಸತ್ಯ ನಿಮಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಗಳು ಸ್ಪಷ್ಟಪಡಿಸಿದರು.
ಹಿಂದಿನ ಸರ್ಕಾರ 11000 ಕೋಟಿ ರೂ.ಗಳ ಮೊತ್ತವನ್ನು ಎಸ್ಕಾಂ ಗಳಿಗೆ ಬಾಕಿ ಉಳಿಸಿದೆ. ಅವರು ಉಳಿಸಿ ಹೋದ ಹೊರೆಯನ್ನು ನಾವು ಭರಿಸಬೇಕಿದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಆಗಿರುವ ಅನಾಹುತಗಳನ್ನು ನಾವು ಸರಿಪಡಿಸಬೇಕಿದೆ ಎಂದು ಹೇಳಿದರು.