ಬಳ್ಳಾರಿ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ದಂಪತಿ ಟಿವಿ ಖರೀದಿಸಿದ್ದಾರೆ.
ಬಳ್ಳಾರಿಯ ಸಂಗನಕಲ್ಲು ಗ್ರಾಮದ ಮಹಿಳೆ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಟಿವಿ ಖರೀದಿಸಿದ್ದಾರೆ. ಹೌದು, ಬರೊಬ್ಬರಿ 13,600 ರೂ ಮೌಲ್ಯದ ಟಿವಿ ಖರೀದಿ ಮಾಡಿದ್ದು, ಯುಗಾದಿ ಹಬ್ಬಕ್ಕೆ ಟಿವಿ ಖರೀದಿಸಿ ಸಂತಸ ವ್ಯಕ್ತಪಡಿಸಿದರು.