ಬೆಂಗಳೂರು: 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಬೆಂಗಳೂರು ಒನ್ ಸೆಂಟರ್ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ನಡೆಸಿ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆಯುತ್ತಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲೇ 14 ಸಾವಿರ ‘ಗೃಹಲಕ್ಷ್ಮೀ’ ಅರ್ಜಿ ಬಾಕಿ ಇದೆ. ಈ ಹಿನ್ನೆಲೆ ಕಲಬುರಗಿ ಸಿಡಿಪಿಒಗೆ ತರಾಟೆ ತೆಗೆದುಕೊಂಡಿದ್ದಾರೆ. ಆದಷ್ಟು ಬೇಗ ಅರ್ಜಿಯನ್ನು ವಿಲೇವಾರಿ ಮಾಡಲು ಏನು ಸಮಸ್ಯೆ? ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವಾರದೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ CDPO ತಿಳಿಸಿದ್ದಾರೆ.