ಗದಗ ಜಿಲ್ಲೆಯ ರೋಣ ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ರೋಣ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ರು. ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಶಾಸಕ ಜಿ.ಎಸ್. ಪಾಟೀಲ್ ನೇತೃತ್ವದಲ್ಲಿ 197 ಕೋಟಿ ರೂಪಾಯಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇವೆ ಅಂದ್ರು.
ಗಜೇಂದ್ರಗಡದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಉಳಿಸಿ ಕೊಳವೆಬಾವಿಯನ್ನು ಕೊರೆಸಿದ್ದಾರೆ. ಇಂತಹ ಕಾರ್ಯಕ್ರಮಗಳ ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ನೀಡುವ ಕೆಲಸ ಮಾಡುತ್ತಿದ್ದೇವೆ. ಸಾಮಾಜಿಕವಾಗಿ, ಆರ್ಥಿಕವಾಗಿ ಬಲ ತುಂಬಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಡಂಬಳದಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸುವ ಕುರಿತು ಶಾಸಕ ಜಿ.ಎಸ್.ಪಾಟೀಲ ಅವರು ಬೇಡಿಕೆಯಿಟ್ಟಿದ್ದು, ಮುಂದಿನ ಬಜೆಟ್ನಲ್ಲಿ ನೂರಕ್ಕೆ ನೂರರಷ್ಟು ಪರಿಗಣಿಸುತ್ತೇವೆ ಎಂದರು. ಇದೇ ವೇಳೆ ಜಿ ಎಸ್ ಪಾಟೀಲ್ ಅವರು ಮಂತ್ರಿ ಆಗಲು ಎಲ್ಲಾ ಅರ್ಹತೆಗಳೂ ಇದ್ದಾವೆ ಅಂತಾ ಹೇಳಿದ್ರು.
ಡಿಸಿಎಂ ಡಿ.ಕೆ. ಶಿವಕುಮಾರ ಮಾತನಾಡಿ, ಇಂದಿನ ಈ ಕಾರ್ಯಕ್ರಮ ಇದೊಂದು ಐತಿಹಾಸಿಕ ಪುಟಕ್ಕೆ ಸೇರುವಂತಹ ಕಾರ್ಯಕ್ರಮ. ಜಿ.ಎಸ್. ಪಾಟೀಲ್ ಅವರ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಕಲ್ಲುಗಳನ್ನು ನೋಡಿದರೆ ಒಂದು ಮನೆಯನ್ನೇ ಕಟ್ಟಿಸಬಹುದು. ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧುಬಳಗ ಎಂದು ಹೇಳಿದರು. ಕರ್ನಾಟಕ ಖನಿಜ ಅಭಿವೃಧ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿರೋಧ ಪಕ್ಷದವರು ಸರಕಾರದ ಖಜಾನೆ ಖಾಲಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ.
Monday Tips: ಸೋಮವಾರ ಈ ಕೆಲಸ ಮಾಡಿದರೆ ಸಾಕು ಲಕ್ಷ್ಮೀ ಭಾಗ್ಯ ನಿಮ್ಮ ಮನೆಯಲ್ಲಿರುತ್ತೆ..!
ಆದರೆ, ನನ್ನ ಕ್ಷೇತ್ರದಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಅಂದ್ರು. ಕಾರ್ಯಕ್ರಮದಲ್ಲಿ ಸಚಿವ ಎಚ್ ಕೆ ಪಾಟೀಲ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಮಾಜಿ ಸಂಸದ ಆರ್.ಎಸ್. ಪಾಟೀಲ, ಐ.ಜಿ. ಸನದಿ, ಮಾಜಿ ಶಾಸಕರಾದ ಬಿ ಆರ್ ಯಾವಗಲ್, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ಬಿ.ಎಸ್. ಪಾಟೀಲ, ಆನಂದಸ್ವಾಮಿ ಗಡ್ಡದೇವರಮಠ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಭರತ್ ಎಸ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿ ಇತರರು ಇದ್ದರು.