ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ: ಕಾಣದಂತಾದ ರಸ್ತೆಗಳು, ವರುಣನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ!

ಬೆಂಗಳೂರು:- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಬೆಂಗಳೂರಿಗೆ ದೊಡ್ಡ ಮಳೆಯನ್ನೇ ಹೊತ್ತುತಂದಿದೆ. ಭಾನುವಾರ ಸಂಜೆಯಿಂದಲೂ ಶುರುವಾಗಿದ್ದ ಮಳೆ ಸೋಮವಾರ ಸಂಜೆವರೆಗೂ ಒಂದೇ ಸಮನೇ ಧಾರಾಕಾರವಾಗಿ ಸುರಿದಿದೆ. ಕರ್ತವ್ಯಲೋಪ ಹಿನ್ನೆಲೆ: ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್! ಆಗೋಮ್ಮೆ ಈಗೊಮ್ಮೆ ಬಿಡುವು ಕೊಟ್ಟರೂ ಬರೋಬ್ಬರಿ 59.8 ಮಿ.ಮೀ ಮಳೆಯಾಗಿದೆ. ಅದರಲ್ಲೂ ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ 80.01 ಮಿ.ಮೀ ಮಳೆ ದಾಖಲಾಗಿದೆ. ಈ ವರುಣಾರ್ಭಟ ಬೆಂಗಳೂರಿನಲ್ಲಿ ಸೃಷ್ಟಿಸಿರೋ ಅವಾಂತರಗಳು ಒಂದೆರಡಲ್ಲ. ಗೊರಗುಂಟೆಪಾಳ್ಯ ಬಳಿಯ ರಾಜಕುಮಾರ್ ರಸ್ತೆಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಟೆಂಪೊ, … Continue reading ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ: ಕಾಣದಂತಾದ ರಸ್ತೆಗಳು, ವರುಣನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ!