ಶಿವಮೊಗ್ಗ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಸೊರಬದ ಬ್ಲಾಕ್ ವ್ಯಾಪ್ತಿಯ ವಿವಿಧ ಇಲಾಖೆಗಳ 25 ಕಾಮಗಾರಿಗಳು ಮತ್ತು 58 ಕಾಮಗಾರಿಗಳ ಶಂಕುಸ್ಥಾಪನೆ (ಒಟ್ಟು 56.34ಕೋಟಿ ಮೊತ್ತದ) ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಕಚೇರಿ , ತಾಲ್ಲೂಕು ಬಗರ್ ಹುಕುಂ ಸಮಿತಿ ಕಚೇರಿ ಹಾಗೂ ಸೊರಬ ಪ್ರಥಮ ದರ್ಜೆ ಕಾಲೇಜಿನ ಹೊಸ ಕಟ್ಟಡ ಕಾಮಗಾರಿಗಳನ್ನು ಶುಕ್ರವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಆರ್ಥಿಕತೆ ರೂಪದಲ್ಲಿ, ಆಹಾರವಾಗಿ, ಬಡವರ ಮನೆಗಳ ಜ್ಯೋತಿಯಾಗಿ ಬೆಳಗುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಲ್ಲ. ಬದಲಾಗಿ ಅದು ಅಕ್ಷಯ ಪಾತ್ರೆ. ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಗೃಹಲಕ್ಷ್ಮಿಅಡಿಯಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳು ರೂ.2000 , ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ, ಯುವನಿಧಿ ಯೋಜನೆಯಡಿ ೧೭ ಲಕ್ಷ ವಿದ್ಯಾರ್ಥಿಗಳು ಸೌಲಭ್ಯ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ೫ ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲು ಹಣವನ್ನು ಸಂದಾಯ ಮಾಡಲಾಗುತ್ತಿದ್ದು,
Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?
ರಾಜ್ಯದ ಬಡ ಜನತೆಯ ಏಳ್ಗೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ ಎಂದರು. ಶಂಕುಸ್ಥಾಪನೆಯಾದ ಕಾಮಗಾರಿಗಳ ಕೆಲಸವನ್ನು ನಾಳೆಯಿಂದನೇ ಆರಂಭಿಸಬೇಕು. ಗುಣಮಟ್ಟದ ಕಾಮಗಾರಿಗಳು ಆಗಬೇಕು. ಎಲ್ಲ ಗ್ರಾಮಗಳಿಗೆ ನಾನೇ ವೈಯಕ್ತಿಕ ವಾಗಿ ಭೇಟಿ ನೀಡುತ್ತೇನೆ. ಸೊರಬ ತಾಲ್ಲೂಕಿನಲ್ಲಿ ಮುಂದಿನ ಜನವರಿ ಒಳಗೆ ರೂ. 200 ಕೋಟಿ ಮೊತ್ತದಲ್ಲಿ ಸುಮಾರು ೧೭೯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.