ಬೆಂಗಳೂರು:- ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
PAK V/S IND: ವಿಶ್ವಕಪ್ನ ಮೆಗಾ ಪಂದ್ಯಕ್ಕೆ ಕ್ಷಣಗಣನೆ.. ಭಾರತ-ಪಾಕ್ ಕದನಕ್ಕೆ ಫ್ಯಾನ್ಸ್ ಕಾತುರ..!
ಈ ಸಂಬಂಧ ಮಾತನಾಡಿದ ಅವರು,ಗ್ಯಾರಂಟಿ ಯೋಜನೆಗಳಿಂದ ತಮ್ಮ ಪಕ್ಷಕ್ಕೆ ಲಾಭವಾಗಿರಬಹುದು, ಅದರೆ, ಅವುಗಳನ್ನು ರಾಜಕೀಯ ದೃಷ್ಟಿಕೋನದಿಂದ ಜಾರಿಗೊಳಿಸಿಲ್ಲ, ರಾಜ್ಯದ ಲಕ್ಷಾಂತರ ಬಡವರು, ಕೂಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲು ಯೋಜನೆಗಳನ್ನು ರಚಿಸಿ ಜಾರಿಗೊಳಿಸಲಾಗಿದೆ. ಬಹಳ ವರ್ಷಗಳ ಹಿಂದೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಗರೀಬೀ ಹಟಾವೋ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರು. ಅದನ್ನೇ ಪ್ರೇರಣೆ ಮತ್ತು ಆಧಾರವಾಗಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ವಿನ್ಯಾಸಗೊಳಿಸಿ ಜಾರಿಗೊಳಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್ ಸೋತರೆ ಯೋಜನೆಗಳು ನಿಲ್ಲಲಿವೆ ಅಂತ ಅಪಪ್ರಚಾರ ಮಾಡಿದ್ದಾರೆ. ಅದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ತಾನು ಚುನಾವಣೆಯ ಫಲಿತಾಂಶ ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗಲ್ಲ ಅಂತ ಹೇಳಿದ್ದೆವು, ಅವು ನಿಲ್ಲಲ್ಲ ಎಂದು ಪರಮೇಶ್ವರ್ ಹೇಳಿದರು.