ಬೆಂಗಳೂರು:- ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿದೆ. ರಾಜ್ಯ ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.
KKR VS LSG: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ, ಲಕ್ನೋ ಬ್ಯಾಟಿಂಗ್!
ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಕುಮಾರಸ್ವಾಮಿ ಅವರು ಧಕ್ಕೆ ತಂದಿದ್ದಾರೆ. ಈ ಹಿನ್ನಲೆ ಹೆಚ್ಡಿಕೆ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿದ್ದು, ನೋಟಿಸ್ ಜಾರಿ ಮಾಡಲಿದೆ.
ಇನ್ನೂ ತುರುವೇಕೆರೆಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಮಾತನಾಡಿ , ‘ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.