ದೆಹಲಿಯ ತವರು ಮೈದಾನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳ ನಡುವೆ ನಡೆಯುತ್ತಿದೆ.
ಹುಡುಗಿಯರೇ ಹುಷಾರ್: ಪದೇಪದೆ ಮುಖವನ್ನು ಬ್ಲೀಚ್ ಮಾಡಿಸುತ್ತಿದ್ದರೆ ಈ ಅಪಾಯ ಗ್ಯಾರಂಟಿ!
ಟಾಸ್ ಗೆದ್ದ ಗುಜರಾತ್ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಐಪಿಎಲ್ 2024ರ 40ನೇ ಪಂದ್ಯ ದೆಹಲಿಯ ತವರು ಮೈದಾನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳ ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವೆ ಇದು ಈ ಸೀಸನ್ನ ಎರಡನೇ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ತಂಡ ಏಕಪಕ್ಷೀಯವಾಗಿ 6 ವಿಕೆಟ್ಗಳ ಜಯ ಸಾಧಿಸಿತ್ತು. ಈ ಸೀಸನ್ನಲ್ಲಿ ಡೆಲ್ಲಿ ತಂಡ 8 ಪಂದ್ಯಗಳಲ್ಲಿ ಕೇವಲ 3 ಗೆಲುವು ಸಾಧಿಸಿದರೆ, ಗುಜರಾತ್ ತಂಡ 8 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಉಭಯ ತಂಡಗಳಿಗೆ ಮುಂದಿನ ಹಂತಕ್ಕೆ ಹೋಗಲು ಇಂದಿನ ಪಂದ್ಯದ ಗೆಲುವು ಅತ್ಯವಶ್ಯಕವಾಗಿದೆ