ಬೆಂಗಳೂರು: ಹಾಸ್ಟೆಲ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು, ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಗುಜರಾತ್ ಮೂಲದ ನಿಲೇ ಕೈಲಾಶ್ ಭಾಯ್ ಪಟೇಲ್ ಮೃತ ವಿದ್ಯಾರ್ಥಿಯಾಗಿದ್ದು, ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ.
Vastu Tips: ಅಪ್ಪಿ ತಪ್ಪಿಯೂ ಚಪ್ಪಲಿಗಳನ್ನು ತಲೆಕೆಳಗಾಗಿ ಇಡಲೇಬಾರದು..! ಯಾಕೆ ಗೊತ್ತಾ..?
ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.