ಹೊಸ ವರ್ಷದ ಹಿನ್ನೆಲೆಯಲ್ಲಿ ಹಲವು ಸಿನಿಮಾ ತಂಡಗಳು ತಮ್ಮ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿವೆ. ಕೆಲ ಸಿನಿಮಾಗಳು ರಿಲೀಸ್ ಡೇಟ್ ಅನೌನ್ಸ್ ಮಾಡಿದ್ರೆ ಮತ್ತಷ್ಟು ತಂಡಗಳು ತಮ್ಮ ಹೊಸ ಸಿನಿಮಾಗಳನ್ನು ಅನೌನ್ಸ್ ಮಾಡಿವೆ. ಇದೀಗ ಗುರುನಂದನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಬಗ್ಗೆ ಚಿತ್ರತಂಡ ಬಿಗ್ ಅಪ್ ಡೇಟ್ ನೀಡಿದೆ.
‘ಕರ್ಮ ಬ್ರೋಸ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಣ ಆಗುತ್ತಿರುವ ‘ರಾಜು ಜೇಮ್ಸ್ ಬಾಂಡ್’ ಸಿನಿಮಾವನ್ನು ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡುತ್ತಿದ್ದಾರೆ. ‘ಫಸ್ಟ್ ರ್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ಅವರು ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದು, ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹೆಚ್ಚಿದೆ. ಫೆಬ್ರವರಿ 14ರಂದು ‘ರಾಜು ಜೇಮ್ಸ್ ಬಾಂಡ್’ ರಿಲೀಸ್ ಆಗಲಿದೆ.
‘ರಾಜು ಜೇಮ್ಸ್ ಬಾಂಡ್’ ಸಿನಿಮದಲ್ಲಿ ಗುರುನಂದನ್ ಗೆ ಜೋಡಿಯಾಗಿ ಮೃದುಲಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಸಾಧು ಕೋಕಿಲ, ಚಿಕ್ಕಣ್ಣ, ಜೈ ಜಗದೀಶ್, ರವಿಶಂಕರ್ ಮುಂತಾದ ಕಲಾವಿದರು ನಟಿಸಿದ್ದಾರೆ.
‘ರಾಜು ಜೇಮ್ಸ್ ಬಾಂಡ್’ ಚಿತ್ರದಲ್ಲಿ ಮನಮೋಹಕ ಕಥೆ ಇದೆ ಎಂದು ಸಿನಿಮಾ ತಂಡ ಹೇಳಿಕೊಂಡಿದೆ. ಲಂಡನ್ನಲ್ಲಿ ಶೂಟಿಂಗ್ ಮಾಡಲಾಗಿದೆ. ಸಂಗೀತ ಕೂಡ ಈ ಸಿನಿಮಾದ ಹೈಲೈಟ್ ಎಂದು ನಿರ್ದೇಶಕರು ಭರವಸೆ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಡಿಸೆಂಬರ್ 27ರಂದು ಈ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಉಪೇಂದ್ರ ನಟನೆಯ ‘ಯುಐ’, ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾಗಳು ಡಿಸೆಂಬರ್ ಕೊನೆಯಲ್ಲಿ ರಿಲೀಸ್ ಆದ ಕಾರಣ ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ರಿಲೀಸ್ ಡೇಟ್ ಮುಂದಕ್ಕೆ ಹೋಗಿದ್ದು ಇದೀಗ ಪ್ರೇಮಿಗಳ ದಿನದಂದ ಸಿನಿಮಾ ರಿಲೀಸ್ ಆಗೋದು ಕನ್ಪಾರ್ಮ್ ಆಗಿದೆ.