ಹೈದರಾಬಾದ್:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶದಲ್ಲಿ ಹಲಾಲ್ ಟ್ಯಾಗ್ ಇರುವ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ ಬೆನ್ನಲ್ಲೇ ಹಲಾಲ್ ಟ್ಯಾಗ್ ಇರುವ ಉತ್ಪನ್ನಗಳ ನಿಷೇಧದ ಕುರಿತು ಸ್ಪಷ್ಟನೆ ನೀಡಿದ್ದಾರೆ
ದೇಶಾದ್ಯಂತ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಲಾಲ್ ಪ್ರಮಾಣಪತ್ರ ಇರುವ ಉತ್ಪನ್ನಗಳ ಮಾರಾಟ, ಸಂಗ್ರಹಣೆ, ಸಾಗಣೆಯ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.
ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ಕೆಲವು ದಿನಗಳ ಹಿಂದಷ್ಟೇ ನಿಷೇಧಿಸಿತ್ತು. “ಜನರ ಆರೋಗ್ಯದ ದೃಷ್ಟಿಯಿಂದ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.