ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಳ್ಳಹಿಡಿಯುತ್ತಿದ್ಯಾ ಎಂಬ ಅನುಮಾನ ಶುರುವಾಗಿದೆ.
ಬೆಂಗಳೂರು, ಹಾಸನ, ರಾಯಚೂರು, ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ಕೆಲವು ಮಹಿಳೆಯರಿಗೆ (Women) ಮೊದಲ ತಿಂಗಳ ಹಣ ಮಾತ್ರ ಬಂದಿದ್ದರೆ, ಕೆಲವರಿಗೆ ಮೂರು ತಿಂಗಳ ಹಣ ಬಂದಿದೆ. ಆದರೆ ಕಡು ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ಒಂದು ತಿಂಗಳ ಹಣವೂ ಬಂದಿಲ್ಲ
ಅಧಿಕಾರಿಗಳನ್ನು ಪ್ರಶ್ನಿಸಿದರೆ ಆಧಾರ್ ಕಾರ್ಡ್ ನಂಬರ್, ಫೋನ್ ನಂಬರ್ ಸರಿಯಲ್ಲ ಎನ್ನುತ್ತಾರೆ. ಎಲ್ಲವನ್ನು ಸರಿಪಡಿಸಿದರೂ ಸಹ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ.ಬ್ಯಾಂಕ್ ಹಾಗೂ ಕಂಪ್ಯೂಟರ್ ಸೆಂಟರ್ಗಳಲ್ಲಿ ಗ್ಯಾರೆಂಟಿ ಯೋಜನೆ ಹಣದ ಬಗ್ಗೆ ವಿಚಾರಿಸಿ ನಿರಾಶರಾಗಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ