ಗದಗ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಸಂಘರ್ಷ ತಾರಕಕ್ಕೇರಿದೆ. ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಹೋರಾಟದ ಕಿಚ್ಚು ಹೆಚ್ಚಾಗಿದೆ. ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ನೇತೃತ್ವದಲ್ಲಿ ಹಿಂದೂ ವಿರೋಧಿ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹನುಮಧ್ವಜವನ್ನು ಮತ್ತೆ ಅದೇ ಜಾಗದಲ್ಲಿ ಹಾರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.